ಟಿಬಿಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

tnit editors
1 Min Read

ಟಿಬಿಡ್ಯಾಂಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಕೊಪ್ಪಳ: ಗೇಟ್‌ ಹಾನಿಯಾದ ಬಳಿಕ ಮತ್ತೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಅರ್ಪಿಸಿದ್ದಾರೆ. ಆಗಸ್ಟ್‌‌ 12ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಬೇಕಿತ್ತು. ಆದರೆ ಆಗಸ್ಟ್‌ 11ರಂದು ಗೇಟ್ 19 ಕಿತ್ತೋದ ಕಾರಣಕ್ಕೆ ಬಾಗಿನ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈಗ ತುಂಗಭದ್ರಾ ಮತ್ತೆ ಭರ್ತಿಯಾಗಿದ್ದು, ಭಾಗಿನ ಅರ್ಪಿಸುವ ಮೂಲಕ ಮಾತಿನಂತೆ ಮುಖ್ಯಮಂತ್ರಿಗಳು ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು.
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article