ಟಿ20 ವಿಶ್ವಕಪ್‌: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

1
57

ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ಅಕ್ಟೋಬರ್ 17ರ ಭಾನುವಾರದಿಂದ ಆರಂಭವಾಗಿವೆ. ಟೂರ್ನಿಯ ಸೂಪರ್ 12 ಹಂತ ಅಕ್ಟೋಬರ್ 23ರ ಶನಿವಾರದಿಂದ ಆರಂಭಗೊಳ್ಳಲಿದ್ದು ಇದಕ್ಕೂ ಮುನ್ನ ಕೆಲ ಅಭ್ಯಾಸ ಪಂದ್ಯಗಳಲ್ಲಿ ವಿವಿಧ ತಂಡಗಳು ಕಣಕ್ಕಿಳಿಯುತ್ತಿವೆ.

ಹೀಗೆ ಅಭ್ಯಾಸ ಪಂದ್ಯಗಳ ಪೈಕಿ ಮೊದಲನೇ ಪಂದ್ಯ ಇಂದು ( ಅಕ್ಟೋಬರ್ 18 ) ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಮತ್ತು ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡಗಳ ನಡುವೆ ದುಬೈನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಎದುರಾಳಿ ಇಂಗ್ಲೆಂಡ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದರು.

ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರರಾದ ಜೇಸನ್ ರಾಯ್ 17 ಮತ್ತು ತಂಡದ ನಾಯಕ ಜೋಸ್ ಬಟ್ಲರ್ 18 ರನ್ ಗಳಿಸಿ ದೊಡ್ಡ ಮಟ್ಟದ ಆರಂಭವನ್ನು ಕಟ್ಟಿಕೊಡುವಲ್ಲಿ ವಿಫಲರಾದರು. ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೇವಿಡ್ ಮಲನ್ ಕೂಡ 18 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರೆ, ನಂತರ ಬಂದ ಜಾನಿ ಬೈರ್‌ಸ್ಟೋ 49, ಲಿಯಾಮ್ ಲಿವಿಂಗ್‌ಸ್ಟನ್ 30 ಮತ್ತು ಮೊಯಿನ್ ಅಲಿ ಅಜೇಯ 43 ರನ್ ಗಳಿಸಿ ಉತ್ತಮ ಆಟವನ್ನಾಡಿದರು ಹಾಗೂ ಕ್ರಿಸ್ ವೋಕ್ಸ್ ಅಜೇಯ 1 ರನ್ ಗಳಿಸಿದರು. ಅದರಲ್ಲಿಯೂ ಮೊಯಿನ್ ಅಲಿ 20 ಎಸೆತಗಳಲ್ಲಿ ಅಜೇಯ 43 ರನ್ ಬಾರಿಸುವುದರ ಮೂಲಕ ಬಿರುಸಿನ ಬ್ಯಾಟಿಂಗ್ ನಡೆಸಿದರು. ಈ ಮೂಲಕ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಟೀಮ್ ಇಂಡಿಯಾಗೆ 189 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿತು.


ಇಂಗ್ಲೆಂಡ್ ನೀಡಿದ ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೆಎಲ್ ರಾಹುಲ್, ಇಶಾನ್ ಕಿಶನ್ ಮತ್ತು ರಿಷಭ್ ಪಂತ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ 19 ಓವರ್‌ಗಳಲ್ಲಿ 192 ರನ್ ಗಳಿಸಿ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತು.

1 COMMENT

LEAVE A REPLY

Please enter your comment!
Please enter your name here