ಟೀಮ್ ಇಂಡಿಯಾಗಿಂತ ನ್ಯೂಜಿಲೆಂಡ್‌ಗೆ ಹೆಚ್ಚು ಅನುಕೂಲ

Date:

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದ ಕುರಿತು ವಿಶ್ವದ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಯಾವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.

ಈಗಾಗಲೇ ಈ ಪಂದ್ಯದ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಇದೀಗ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮಾಂಟಿ ಪನೇಸರ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಂಗ್ಲೆಂಡ್ ತಲುಪಿರುವ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ವಿರುದ್ಧ ಜೂನ್ 2ರಿಂದ ಆರಂಭವಾಗಲಿರುವ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.


ಇನ್ನು ಮಾಂಟಿ ಪನೇಸರ್ ಈ ಎರಡು ಪಂದ್ಯಗಳನ್ನು ಗಣನೆಗೆ ತೆಗೆದುಕೊಂಡು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ‘ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ತಂಡ 2 ಟೆಸ್ಟ್ ಪಂದ್ಯಗಳನ್ನು ಆಡುವುದರಿಂದ ನ್ಯೂಜಿಲೆಂಡ್ ತಂಡಕ್ಕೆ ಈ ಪಂದ್ಯದಲ್ಲಿ ಆಗುವ ಅನುಭವ ಅನುಕೂಲವಾಗಿ ಪರಿಣಮಿಸಲಿದೆ. ಈ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ ಕಿವೀಸ್‌ಗೆ ಅದು ಪ್ಲಸ್ ಪಾಯಿಂಟ್ ಆಗಲಿದೆ, ಒಂದುವೇಳೆ ಸೋತರೆ ಅದು ಖಚಿತವಾಗಿ ಭಾರತ ತಂಡದ ವಿಶ್ವಾಸವನ್ನು ಹೆಚ್ಚಿಸಲಿದೆ’ ಎಂದು ಮಾಂಟಿ ಪನೇಸರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...