No menu items!
8.7 C
Munich
Wednesday, April 15, 2026

ಟೆಕ್ಕಿ ಸ್ನಾನದ ಕೋಣೆಯಲ್ಲಿ ಯುವತಿಯ ಹೆಣ!

Must read

ಬೆಂಗಳೂರಿನ ಟೆಕ್ಕಿ ಫ್ಲಾಟ್ ಒಂದರಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬೆಳ್ಳಂದೂರಿನ ಟೆಕ್ಕಿ ಫ್ಲಾಟ್ ನಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಕವಿತಾ ಎಂಬ ಯುವತಿ ಸಾವನ್ನಪ್ಪಿರುವ ದುರ್ದೈವಿ ಎಂದು ಹೇಳಲಾಗಿದೆ.

ಈ ಯುವತಿ ಟೆಕ್ಕಿ ವಿವೇಕ್ ಎಂಬಾತನ ಮನೆಯಲ್ಲಿ ಮಗುವನ್ನು ನೋಡಿಕೊಳ್ಳುತ್ತಿದ್ದು, ಬೆಳಿಗ್ಗೆ ಸ್ನಾನದ ಮನೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಇನ್ನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಮಾಹಿತಿ ನೀಡಿದ್ದಾರೆ. ಅಲ್ಲದೇ ಯುವತಿ ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಆಕೆಯ ಪೋಷಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾಳೆ ಎಂದು ವಿವೇಕ್ ಮಾಹಿತಿ ನೀಡಿದ್ದಾರೆ. ಸದ್ಯ ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಯುವತಿಯ ಮೃತ ದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article