ಟಿಕ್ ಟಾಕ್ ಹಿಂದಿಕ್ಕಿದ ಟೆಲಿಗ್ರಾಂ!

Date:

ಜನಪ್ರಿಯ ಅಪ್ಲಿಕೇಶನ್ ಟೆಲಿಗ್ರಾಂ,  2021 ರಲ್ಲಿ ಬರೋಬ್ಬರಿ 63 ಮಿಲಿಯನ್ ಡೌನ್ ಲೋಡ್ ಆಗುವ ಮೂಲಕ ಅತೀ ಹೆಚ್ಚು ಡೌನ್ ಲೋಡ್  ಆದ  ಆ್ಯಪ್ ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.

ಈ ಕುರಿತಾಗಿ ಸೆನ್ಸರ್ ಟವರ್ ಸಂಸ್ಥೆ ವರದಿಯೊಂದನ್ನು ನೀಡಿದ್ದು.  ಪ್ಲೇ-ಸ್ಟೋರ್ ನಲ್ಲಿ ಅತೀ ಹೆಚ್ಚು ಡೌನ್ ಲೋಡ್ ಆದ ಆ್ಯಪ್ ಗಳ ಪಟ್ಟಿಯಲ್ಲಿ ಟೆಲಿಗ್ರಾಂ ಸ್ಥಾನ ಪಡೆದಿದೆ. ಈ ಹಿಂದೆ ಡೌನ್ ಲೋಡ್ ವಿಚಾರವಾಗಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ  9ನೇ ಸ್ಥಾನದಲ್ಲಿದ್ದ ಟೆಲಿಗ್ರಾಂ ಇದೀಗ ಅಗ್ರ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಇನ್ನು  ಆ್ಯಪಲ್ ಸ್ಟೋರ್ ನಲ್ಲಿಯೂ ಅತೀ ಹೆಚ್ಚು ಡೌನ್ ಲೋಡ್ ಆಗಿರುವ ಆ್ಯಪ್ ಗಳ ಪೈಕಿ  ನಾಲ್ಕನೇ ಸ್ಥಾನ ಗಿಟ್ಟಿಸಿಕೊಂಡಿದೆ ಎಂದು ವರದಿಯಾಗಿದೆ.

ಟೆಲಿಗ್ರಾಂ ವಿಶ್ವದಾದ್ಯಂತ ಬರೋಬ್ಬರಿ  63 ಮಿಲಿಯನ್ ಡೌನ್ ಲೋಡ್ ಗಳನ್ನು ಪಡೆದುಕೊಂಡಿದ್ದು, ಈ ಪೈಕಿ  ಭಾರತದಲ್ಲಿಯೇ ಶೇ 24 ರಷ್ಟು  ಮಂದಿ ಆ್ಯಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ಶೇ. 10 ರಷ್ಟು ಜನರು ಇಂಡೋನೇಶಿಯನ್ನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಹೊರತುಪಡಿಸಿ ಅತೀ ಹೆಚ್ಚು ಡೌನ್ ಲೋಡ್ ಆದ ಆ್ಯಪ್ ಗಳಲ್ಲಿ ಟಿಕ್ ಟಾಕ್ 2ನೇ ಸ್ಥಾನ ಪಡೆದಿದೆ.

ವಾಟ್ಸ್ ಅಪ್ ನೂತನ ನಿಯಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಹಲವಾರು ಬಳಕೆದಾರರು ಟೆಲಿಗ್ರಾಂ, ಸಿಗ್ನಲ್  ಸೇರಿದಂತೆ ಹಲವು  ಆ್ಯಪ್ ಗಳತ್ತ ಮುಖಮಾಡಿದ್ದರು.


ಸ್ಟಾರ್‌ ನಟರ ಹೆಸರಿನಲ್ಲಿ ಅಭಿಮಾನಿ ಸಂಘಗಳನ್ನು ಕಟ್ಟಿಕೊಳ್ಳುವುದು ಸಾಮಾನ್ಯವಾಗಿ ಪುರುಷರು. ಅದರಲ್ಲೂ ಯುವಕರ ಗುಂಪು ಇಂಥ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತದೆ. ಆದರೆ ಕಿಚ್ಚ ಸುದೀಪ್‌ ಅವರ ಮಹಿಳಾ ಅಭಿಮಾನಿಗಳು ಕೂಡ ಇಂಥದ್ದೊಂದು ಸಂಘ ಮಾಡಿಕೊಂಡು ಒಳ್ಳೆಯ ಕೆಲಸಗಳಲ್ಲಿ ನಿರತರಾಗಿದ್ದಾರೆ!
ಈ ಮಹಾಸೇನೆಯಲ್ಲಿ ಬರೀ ಮಹಿಳೆಯರೇ ಸಕ್ರಿಯರಾಗಿದ್ದಾರೆ. 5 ಸಾವಿರಕ್ಕೂ ಅಧಿಕ ಸ್ರೀಯರು ಸುದೀಪ್‌ ಮೇಲಿನ ಅಭಿಮಾನಕ್ಕಾಗಿ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ನಟರೊಬ್ಬರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಮಹಿಳಾ ಅಭಿಮಾನಿಗಳನ್ನು ಹೊಂದಿರುವ ಸಂಘ ಭಾರತದಲ್ಲೇ ಮೊದಲು ಎಂದು ಈ ಮಹಿಳಾ ಸೇನೆಯ ಸದಸ್ಯರು ಹೇಳಿಕೊಂಡಿದ್ದಾರೆ.
ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಅಡಿಯಲ್ಲಿ ಈ ಸಂಘ ಕಾರ್ಯ ನಿರ್ವಹಿಸುತ್ತಿದೆ. ಸುದೀಪ್‌ ಅವರ ಮಾರ್ಗದರ್ಶನದಲ್ಲಿ ತಾವು ಮುನ್ನಡೆಯುವುದಾಗಿ ಈ ಸಂಘದ ಮಹಿಳೆಯರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇದನ್ನು ಟ್ವಿಟರ್‌ನಲ್ಲಿ ನೋಡಿದ ಸುದೀಪ್‌ ಅವರು ಮನಸಾರೆ ಪ್ರತಿಕ್ರಿಯಿಸಿದ್ದಾರೆ. ‘ಇದು ಮಧುರವಾಗಿದೆ. ನಿಮ್ಮೆಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ ಅಭಿಮಾನಿಗಳ ಪಾಲಿನ ‘ಅಭಿನಯ ಚಕ್ರವರ್ತಿ’.


ನಟಿ, ಕಾಂಗ್ರೆಸ್ ಪಕ್ಷ ಸದಸ್ಯೆ ರಮ್ಯಾ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ. ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಹೋರಾಟಗಾರ್ತಿ ಗ್ರೆಟಾ ಥೆನ್‌ಬರ್ಗ್‌ ಬಗ್ಗೆ ಟ್ವೀಟ್ ಮಾಡಿದ್ದಾರೆ ರಮ್ಯಾ.
ಗ್ರೆಟಾ ಮಾಡಿದ್ದ ಟ್ವೀಟ್ ಅನ್ನು ಹಂಚಿಕೊಂಡಿರುವ ನಟಿ ರಮ್ಯಾ, ‘ಬಾಲಿವುಡ್‌ಗಿಂತಲೂ ಹೆಚ್ಚು ಬೆನ್ನುಮೂಳೆ ಇದೆ’ ಎಂದಿದ್ದಾರೆ ರಮ್ಯಾ. ಆ ಮೂಲಕ ಬಾಲಿವುಡ್‌ನ ಹಲವರಿಗೆ ಆತ್ಮಗೌರವ ಇಲ್ಲ, ಪುಕ್ಕಲರು ಎಂದು ಪರೋಕ್ಷವಾಗಿ ಹೇಳಿದ್ದಾರೆ ನಟಿ ರಮ್ಯಾ.
ಅದಾದ ಬಳಿಕ ನಟ ಅಕ್ಷಯ್ ಕುಮಾರ್ ಗೆ ಪ್ರಶ್ನೆ ಮಾಡಿರುವ ರಮ್ಯಾ, ‘ಕೆನೆಡಿಯನ್ ಪ್ರಜೆ ಅಕ್ಷಯ್ ಕುಮಾರ್, ಭಾರತದ ವಿಷಯದ ಬಗ್ಗೆ ಮಾತನಾಡಬಹುದಾದರೆ, ರಿಹಾನ್ನ ಏಕೆ ಮಾತನಾಡಬಾರದು’ ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿ ರೈತ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ್ತಿ ಗ್ರೆಟಾ ಥೆನ್‌ಬರ್ಗ್ ಬೆಂಬಲ ಸೂಚಿಸಿದ್ದರು. ಇದೇ ಕಾರಣಕ್ಕೆ ದೆಹಲಿಯಲ್ಲಿ ಗ್ರೆಟಾ ವಿರುದ್ಧ ದೂರು ದಾಖಲಾಗಿತ್ತು. ಅದರ ನಂತರ ಮತ್ತೆ ಟ್ವೀಟ್ ಮಾಡಿದ್ದ ಗ್ರೆಟಾ, ‘ಈಗಲೂ ನಾನು ರೈತರ ಪ್ರತಿಭಟನೆ ಪರ ಇದ್ದೇನೆ ಮತ್ತು ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ನೀವು ಎಷ್ಟೇ ದ್ವೇಷಿಸಿದರೂ, ಮಾನವ ಹಕ್ಕು ಉಲ್ಲಂಘನೆ ಮಾಡಿದರೂ ನನ್ನ ನಿರ್ಧಾರ ಬದಲಾಗುವುದಿಲ್ಲ’ ಎಂದಿದ್ದಾರೆ ಗ್ರೆಟಾ.
ಗ್ರೆಟಾ ಥೆನ್‌ಬರ್ಗ್ ಹಾಗೂ ಪಾಪ್ ಗಾಯಕಿ ರಿಹಾನ್ನ ಅವರುಗಳು ದೆಹಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಬೆನ್ನಲ್ಲೇ, ಬಾಲಿವುಡ್‌ನ ಹಲವು ನಟರು, ಕ್ರಿಕೆಟ್ ಸ್ಟಾರ್‌ಗಳು ‘ಹೊರಗಿನವರು ಭಾರತದ ವಿಷಯದಲ್ಲಿ ಮೂಗು ತೂರಿಸಬಾರದು’ ಎಂಬರ್ಥ ಬರುವ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು. ಇದು ಭಾರಿ ಟ್ರೋಲ್‌ಗೆ ಗುರಿಯಾಗಿತ್ತು. ಇದೇ ಕಾರಣಕ್ಕೆ ನಟಿ ರಮ್ಯಾ, ‘ಬಾಲಿವುಡ್‌ ಪುಕ್ಕಲು’ ಎಂದು ಹೇಳಿರುವುದು.
ಈ ಹಿಂದೆ ನಟಿ ರಮ್ಯಾ ಡಿಸೆಂಬರ್ 23 ರಂದು ರೈತರ ಪ್ರತಿಭಟನೆ ಬೆಂಬಲಿಸಿ ಒಂದು ಹೊತ್ತಿನ ಊಟ ತ್ಯಜಿಸಿದ್ದರು. ರೈತರ ಹೋರಾಟದ ವಿಷಯವಾಗಿ ನಟಿ ಕಂಗನಾ ರಣೌತ್‌ಗೂ ಟ್ವಿಟ್ಟರ್‌ನಲ್ಲಿ ಪ್ರಶ್ನೆಗಳನ್ನು ಕೇಳಿದ್ದರು ರಮ್ಯಾ. ಅದಕ್ಕೂ ಮುನ್ನಾ ಹತ್ರಾಸ್ ಅತ್ಯಾಚಾರ ಪ್ರಶ್ನಿಸಿ ನಟ ಅಕ್ಷಯ್ ಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದರು.
ನಟಿ ರಮ್ಯಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಕಾಂಗ್ರೆಸ್‌ನಿಂದ ಸಂಸದೆಯಾಗಿಯೂ ಆಯ್ಕೆ ಆಗಿದ್ದರು. ಆದರೆ ಕಳೆದ ಲೋಕಸಭೆ ಚುನಾವಣೆ ನಂತರ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದಾರೆ ರಮ್ಯಾ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...