ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಆದರೂ ತಮ್ಮ ಹೆಸರು ಏಕೆ ಥಳುಕು ಹಾಕಿಕೊಂಡಿದೆ ಎಂಬುದು ಗೊತ್ತಿಲ್ಲ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಅವರಿಗೆ ಬೇಕಾದ ತನಿಖೆ ನಡೆಸಲಿ.
ತಮ್ಮ ಅಭ್ಯಂತರವೇನೂ ಇಲ್ಲ ಎಂದು ಖಾಸಗಿ ವಾಹಿನಿಯೊಂದಕ್ಕೆ ಪ್ರಕ್ರಿಯೆ ನೀಡಿದ್ದಾರೆ. ಮಾಜಿ ಸಚಿವ ಎಚ್.ವಿಶ್ವನಾಥ್ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಕುಮಾರಸ್ವಾಮಿ, ಕಳೆದ ಒಂದು ವರ್ಷದಿಂದ ಯಾರ್ಯಾರು ಏನೇನು ಮಾಡಿದ್ದಾರೆ, ಹೇಗೆ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ಈ ಸಂಬಂಧ ಅನಗತ್ಯ ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ.