ಯಡಿಯೂರಪ್ಪನವರು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು, ಟೆಲಿಫೋನ್ ಕದ್ದಾಲಿಕೆ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದರು.
ಟೆಲಿಫೋನ್ ಕದ್ದಾಲಿಕೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೂ ಯಡಿಯೂರಪ್ಪನವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿದ್ದ ಹಿನ್ನಲೆಯಲ್ಲಿ ತನಿಖೆಗೆ ನಿರಾಸಕ್ತಿ ಹೊಂದಿದ್ದರೆಂದು ಹೇಳಲಾಗಿತ್ತು. ಅನರ್ಹ ಶಾಸಕರು ಸಿಬಿಐ ತನಿಖೆಗೆ ಪಟ್ಟು ಹಿಡಿದ ಹಿನ್ನಲೆಯಲ್ಲಿ ಇದಕ್ಕೆ ಮಣಿದಿರುವ ಯಡಿಯೂರಪ್ಪನವರು ಸಿಬಿಐ ತನಿಖೆಗೆ ಆದೇಶಿಸಿದ್ದಾರೆಂದು ಹೇಳಲಾಗಿದೆ.