ಟೇಬಲ್ ಮೇಲೆ ಲಕ್ಷಲಕ್ಷ ಇಟ್ಟು ಸಭೆ ನಡೆಸಿದ ರೇವಣ್ಣ

Date:

ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಅದರಲ್ಲೇನು ವಿಶೇಷ ಎನ್ನಬೇಡಿ, ಟೇಬಲ್ ಮೇಲೆ 10 ಲಕ್ಷ ರೂಪಾಯಿ ಹಣವನ್ನು ಇಟ್ಟುಕೊಂಡು ಮಾಧ್ಯಮಗಳ ಜೊತೆ ಮಾತನಾಡಿದರು.
ಹಾಸನದಲ್ಲಿ ಶುಕ್ರವಾರ ರೇವಣ್ಣ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಜೊತೆ ಪತ್ರಿಕಾಗೋಷ್ಠಿ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಆರೋಪಗಳನ್ನು ಮಾಡಿದರು.
ಅರಸೀಕೆರೆಯ ನಗರಸಭೆ ಸದಸ್ಯರಿಗೆ ಬಿಜೆಪಿ ಸೇರಲು ಸಂತೋಷ್ 10 ಲಕ್ಷ ಹಣದ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ ರೇವಣ್ಣ, ಅದಕ್ಕಾಗಿಯೇ 10 ಲಕ್ಷ ಹಣವನ್ನು ಪತ್ರಿಕಾಗೋಷ್ಠಿಗೆ ತಂದಿದ್ದರು.

 


“ನಗರಸಭೆ ಸದಸ್ಯರಿಗೆ ಹಣದ ಆಮಿಷವೊಡ್ಡಿದ ಬಗ್ಗೆ ನಾವು ಪೊಲೀಸರಿಗೆ ದೂರು ಕೊಡುತ್ತೇವೆ. ಈ ಬಗ್ಗೆ ಸಿಬಿಐ ತನಿಖೆ ಆಗಬೇಕು. ಸುಪ್ರೀಂಕೋರ್ಟ್ ತನಕ ನಾವು ಹೋಗುತ್ತೇವೆ” ಎಂದು ಎಚ್. ಡಿ. ರೇವಣ್ಣ ಹೇಳಿದರು.
“4-5 ತಿಂಗಳಿನಿಂದ ಜೆಡಿಎಸ್ ಸದಸ್ಯರಿಗೆ ಧಮ್ಕಿ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ನಿಮ್ಮನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಇಲ್ಲ, ಅಧಿಕಾರಕ್ಕಾಗಿ ಏನೂ ಬೇಕಾದರೂ ಮಾಡುತ್ತಾರೆ” ಎಂದು ದೂರಿದರು.
“ಬಿಜೆಪಿ ಸೇರಲು ಆಮಿಷವೊಡ್ಡಿದ ಬಗ್ಗೆ ತನಿಖೆಯಾಗಬೇಕು. ಅವರ ದೂರವಾಣಿ ಕರೆಗಳ ಮಾಹಿತಿ ಸಂಗ್ರಹ ಮಾಡಬೇಕು. ಇದಕ್ಕೆಲ್ಲಾ ಮುಖ್ಯಮಂತ್ರಿಗಳು ನೇರ ಹೊಣೆ” ಎಂದು ರೇವಣ್ಣ ಆರೋಪಿಸಿದರು.
ಅರಸೀಕರೆ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಬಹುದೊಡ್ಡ ಪಕ್ಷ ಹೊರಹೊಮ್ಮಿತ್ತು. ಆದರೆ ಮೀಸಲಾತಿ ಬದಲಾವಣೆ ಮಾಡಿಕೊಂಡು ಬಿಜೆಪಿ ಅಧಿಕಾರಕ್ಕೆ ಬಂದಿದೆ.
ಜೆಡಿಎಸ್‌ನ 7 ಸದಸ್ಯರು ಪಕ್ಷ ತೊರೆದು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅವರಿಗೆಲ್ಲ ಹಣ ನೀಡಲಾಗಿದೆ ಎಂದು ಶಾಸಕ ಶಿವಲಿಂಗೇಗೌಡ ಮತ್ತು ರೇವಣ್ಣ ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...