ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಮತ್ತೊಂದು ಪಂದ್ಯ ಗೆದ್ದ ಸಿಂಧು

Date:

ಟೋಕಿಯೋ ಒಲಿಂಪಿಕ್ಸ್: ಪಿ ವಿ ಸಿಂಧುಗೆ ಮತ್ತೊಂದು ಗೆಲುವು

ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಭಾರವಾರದಂದು ನಡೆದ ಟೋಕಿಯೊ ಒಲಿಂಪಿಕ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿ ಇಸ್ರೇಲ್‌ನ ಆಟಗಾರ್ತಿ ಪುಲಿಕರ್ಪೋವಾ ವಿರುದ್ಧ ಗೆಲುವನ್ನು ಸಾಧಿಸಿದ್ದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಶುಭಾರಂಭವನ್ನು ಮಾಡಿದ್ದ ಪಿವಿ ಸಿಂಧು ಇದೀಗ ತಮ್ಮ ಎರಡನೇ ಪಂದ್ಯವನ್ನು ಸಹ ಗೆಲ್ಲುವುದರ ಮೂಲಕ 16ರ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.


ಬುಧವಾರದಂದು ನಡೆದ ಪಂದ್ಯದಲ್ಲಿ ಭಾರತದ ಪಿ ವಿ ಸಿಂಧು ಮತ್ತು ಹಾಂಗ್‌ಕಾಂಗ್‌ನ ಚ್ಯುಂಗ್ ಗಾನ್ ಯಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯಿತು. ಮೊದಲ ಸೆಟ್‌ನಲ್ಲಿ 21-9 ಅಂತರದಲ್ಲಿ ಲೀಲಾಜಾಲವಾಗಿ ಜಯ ಸಾಧಿಸಿದ ಪಿವಿ ಸಿಂಧುಗೆ ಎರಡನೇ ಸುತ್ತಿನಲ್ಲಿ ಹಾಂಗ್‌ಕಾಂಗ್‌ ಆಟಗಾರ್ತಿ ದಿಟ್ಟ ಪೈಪೋಟಿ ನೀಡಿದರು. ಹಾಂಗ್‌ಕಾಂಗ್ ಆಟಗಾರ್ತಿ ತೀವ್ರ ಹೋರಾಟ ನಡೆಸಿದರೂ ಸಹ ಕೊನೆಯ ಹಂತದಲ್ಲಿ ಪಿವಿ ಸಿಂಧು ಎದುರು ತಲೆಬಾಗಬೇಕಾಯಿತು.


ಎರಡನೇ ಸೆಟ್‌ನಲ್ಲಿ ಪಿವಿ ಸಿಂಧು 21-16 ಅಂತರದಲ್ಲಿ ಗೆಲುವು ಸಾಧಿಸುವುದರ ಮೂಲಕ ಇದೀಗ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಹಾಕಿ ವಿಭಾಗದಲ್ಲಿ 16ರ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಅತ್ತ ಇದಕ್ಕೂ ಮುನ್ನ ನಡೆದ ಮಹಿಳಾ ಹಾಕಿ ಪಂದ್ಯವೊಂದರಲ್ಲಿ ಭಾರತೀಯ ಮಹಿಳಾ ಹಾಕಿ ತಂಡದ ವಿರುದ್ಧ ಗ್ರೇಟ್ ಬ್ರಿಟನ್ ಮಹಿಳಾ ಹಾಕಿ ತಂಡ 4-1 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...