ಟ್ರಂಪ್ ಫೇಸ್ ಬುಕ್ ಖಾತೆ ಬ್ಯಾನ್

Date:

ವಾಷಿಂಗ್ಟನ್: ಅಮೆರಿಕ ಸಂಸತ್ ಭವನದ ಮೇಲೆ ಜನವರಿ 6ರಂದು ನಡೆದ ದಂಗೆಗೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಫೇಸ್‍ಬುಕ್ ಪೋಸ್ಟ್ ಗಳು ಪ್ರಚೋದನಕಾರಿಯಾಗಿದ್ದವು ಎಂಬ ಕಾರಣಕ್ಕೆ ಫೇಸ್‍ಬುಕ್ ಸಂಸ್ಥೆ ಟ್ರಂಪ್ ಖಾತೆಯನ್ನು ಮುಂದಿನ 2 ವರ್ಷಗಳ ಕಾಲ ಬ್ಯಾನ್ ಮಾಡಿದೆ.

ಸಂಸತ್ ಭವನ ಕ್ಯಾಪಿಟಲ್ ಹಿಲ್‍ನಲ್ಲಿ ನಡೆದ ಹಿಂಸಾಚಾರದ ಬಳಿಕ ಜನವರಿ 7ರಂದು ಟ್ರಂಪ್ ಅವರ ಫೇಸ್‍ಬುಕ್ ಖಾತೆಯನ್ನು ರದ್ದು ಮಾಡಲಾಗಿತ್ತು. ಈ ಸಂದರ್ಭ ಟ್ರಂಪ್ ಇದು ಅಮೆರಿಕದವರಿಗೆ ಫೇಸ್‍ಬುಕ್ ಮಾಡಿದ ಅವಮಾನ ಎಂದಿದ್ದರು.

ಇದೀಗ ಫೇಸ್‍ಬುಕ್ ಸಂಸ್ಥೆ ತಿಳಿಸಿರುವಂತೆ ಡೊನಾಲ್ಡ್ ಟ್ರಂಪ್ ಅವರ ವರ್ತನೆ ಫೇಸ್‍ಬುಕ್ ಸಂಸ್ಥೆಯ ಹೊಸ ನಿಯಮಾವಳಿಗಳನ್ನು ಮುರಿದಿದೆ. ಹಿಂಸಾಚಾರಕ್ಕೆ ಪ್ರಚೋದನಕಾರಿಯಾಗಿ ಮಾಡಿದ ಪೋಸ್ಟ್ ಗೆ ಸಂಬಂಧಿಸಿದಂತೆ ಸಂಸ್ಧೆಯು ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ ಡೊನಾಲ್ಡ್ ಟ್ರಂಪ್ ಅವರ ಖಾತೆಯನ್ನು 2023ರ ಜನವರಿವರೆಗೆ ಬ್ಯಾನ್ ಮಾಡಲಾಗಿದೆ ಎಂದು ಫೇಸ್‍ಬುಕ್‍ನ ಜಾಗತಿಕ ವ್ಯವಹಾರಗಳ ಉಪಾಧ್ಯಕ್ಷ ನಿಕ್ ಕ್ಲೆಗ್ ಬ್ಲಾಗ್ ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ.

ಫೇಸ್‍ಬುಕ್‍ನಲ್ಲಿ ಟ್ರಂಪ್ ಅವರ ಖಾತೆ ಬ್ಯಾನ್ ಆಗಿದ್ದರೂ ಕೂಡ ಅವರ ಇತರರು ಹಿಂದಿನ ಪೋಸ್ಟ್ ಗಳನ್ನು ಓದಬಹುದು ಮತ್ತು ಕಾಮೆಂಟ್ ಮಾಡಬಹುದು. ಆದರೆ ಹೊಸ ವಿಷಯಗಳನ್ನು ಪೋಸ್ಟ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಟ್ರಂಪ್ ಖಾತೆಯನ್ನು ಅಮಾನತು ಮಾಡಿರುವ ಫೇಸ್‍ಬುಕ್‍ನ ನಡೆಯನ್ನು ಹಲವರು ಸ್ವಾಗತಿಸಿದ್ದಾರೆ. ಆದರೆ ರಿಪಬ್ಲಿಕನ್ ಶಾಸಕರು, ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದಕ್ಕೆಯಾಗಿದೆ ಎಂದು ಟ್ರಂಪ್ ಖಾತೆ ಮೇಲಿನ ನಿರ್ಬಂಧವನ್ನು ವಿರೋಧಿಸಿದ್ದಾರೆ.

ಫೇಸ್ ಬುಕ್ ಟ್ರಂಪ್ ಖಾತೆಯನ್ನು 2 ವರ್ಷ ಬ್ಯಾನ್ ಮಾಡಿದ್ದರೆ, ಟ್ವಿಟ್ಟರ್ ಮಾತ್ರ ಶಾಶ್ವತವಾಗಿ ಅವರ ಖಾತೆಯನ್ನು ರದ್ದುಮಾಡಿದೆ. 88 ಮಿಲಿಯನ್ ಫಾಲೋವರ್ಸ್ ಹೊಂದಿದ ಟ್ವಿಟ್ಟರ್ ಖಾತೆ ಈಗಾಗಲೇ ಬ್ಯಾನ್ ಆಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...