No menu items!
18.8 C
Munich
Friday, June 19, 2026

ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದರೆ ಬಿಡಲು ಆಗುತ್ತಾ?

Must read

ಬೆಂಗಳೂರು: ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದರೆ ಬಿಡಲು ಆಗುತ್ತಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್ವಾರ್ ಹೇಳಿ ಕೇಳಿ ಆಗಲ್ಲ, ಇದ್ದಕ್ಕಿದ್ದಂತೆ ಮಾಡಿಕೊಳ್ಳುತ್ತಾರೆ. ಅಂತಹ ಸಂದರ್ಭದಲ್ಲಿ ನಾವು ಅವರನ್ನು ನಿಯಂತ್ರಿಸುತ್ತೇವೆ. ಠಾಣೆಗೆ ಬಂದು ತಲೆ ಕತ್ತರಿಸುತ್ತೇವೆ ಅಂದರೆ ಬಿಡಲು ಆಗುತ್ತಾ? ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ರೀತಿ ಮಾಡುತ್ತೇವೆ ಅಂದಿದ್ದಾರೆ.
ಅದು ನನ್ನ ಕಿವಿಗೆ ಬಿತ್ತು. ಕಾನೂನಿನಲ್ಲಿ ಏನು ಕ್ರಮ ಇದೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಬೆಳಗಾವಿ ಗಲ್ಲಿ ಕ್ರಿಕೆಟ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಗಲ್ಲಿಯಲ್ಲಿ ಸಣ್ಣದಾಗಿ ಆದ ಗಲಾಟೆ ದೊಡ್ಡದಾಗಿ ಬೆಳೆಯುತ್ತೆ. ಅದನ್ನ ನಿಯಂತ್ರಿಸುವು ನಮ್ಮ ಪೊಲೀಸರ ಕೆಲಸ. ಮೊದಲೇ ಗಲಾಟೆ ಮಾಡಿಕೊಳ್ಳುತ್ತಾರೆ ಅಂತ ಗೊತ್ತಾದರೆ ಅದು ಬೇರೆ ವಿಚಾರ. ಆ ರೀತಿ ಅನೇಕ ಸಂದರ್ಭಗಳಲ್ಲಿ ಆಗುವುದಿಲ್ಲ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article