No menu items!
18.8 C
Munich
Friday, June 19, 2026

ಡಾ. ಮನಮೋಹನ್ ಸಿಂಗ್ ನಿಧನ: ಇಂದು ರಾಜ್ಯದಲ್ಲಿ ಸರ್ಕಾರಿ ರಜೆ – 7 ದಿನ ಶೋಕಾಚರಣೆ

Must read

ಡಾ. ಮನಮೋಹನ್ ಸಿಂಗ್ ನಿಧನ: ಇಂದು ರಾಜ್ಯದಲ್ಲಿ ಸರ್ಕಾರಿ ರಜೆ – 7 ದಿನ ಶೋಕಾಚರಣೆ

ಬೆಂಗಳೂರು: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು ಮಾಡುತ್ತಿದ್ದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.

- Advertisement -spot_img

More articles

- Advertisement -spot_img

Latest article