ಡಾ.ಯತೀಂದ್ರ ಸಿದ್ದರಾಮಯ್ಯಗೆ ನೋಟೀಸ್..!

Date:

ಚಾಮರಾಜನಗರ: ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹೇಳಿಕೆಯೊಂದನ್ನು ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು.. ಅಮಿತ್ ಶಾ ವಿರುದ್ಧ ರೌಡಿ ಹೇಳಿಕೆ ಸಂಬಂಧ ಚುನಾವಣಾ ಆಯೋಗವು ಯತೀಂದ್ರ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಈ ಬಗ್ಗೆ ಸ್ವತಃ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ. ಟಿ ನರಸೀಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವೆಂಕಟೇಶ್, ಸಿಬಿಐ ವರದಿಯಲ್ಲಿ ಇದ್ದಿದ್ದು ಹೇಳಿದ್ದಕ್ಕೆ ಯತೀಂದ್ರ ಅವರಿಗೆ ನೋಟಿಸ್ ಕೊಡಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಯತೀಂದ್ರ ಸಿದ್ದರಾಮಯ್ಯಗೆ ಚುನಾವಣೆ ಆಯೋಗ ನೋಟಿ ಜಾರಿ ಮಾಡಿರುವುದನ್ನು ಬಹಿರಂಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...