No menu items!
12.1 C
Munich
Saturday, September 12, 2026

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Must read

ಚಿತ್ರದುರ್ಗ: ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಮುರುಘಾಶ್ರೀಗಳಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಶ್ರೀಗಳು ಮೊದಲನೇ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಈ ಮೂಲಕ ಕೇವಲ ನಾಲ್ಕೇ ದಿನಕ್ಕೆ ಶ್ರೀಗಳಿಗೆ ಮತ್ತೆ ಬಂಧನದ ಭೀತಿ ಶುರುವಾಗಿದೆ.
ಇತ್ತೀಚೆಗೆ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article