ದೆಹಲಿ ಹೈಕೋರ್ಟ್ ತಿಹಾರ್ ಜೈಲಿನಲ್ಲಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯ ಕುರಿತಾದ ತೀರ್ಪು ನೀಡಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ದೆಹಲಿ ಹೈಕೋರ್ಟ್ ತೀರ್ಪು ನೀಡಲಿದ್ದು, ಡಿಕೆಶಿಗೆ ಜಾಮೀನು ಸಿಗುತ್ತಾ? ಇಲ್ಲವೆ? ಎಂಬುದನ್ನು ಕಾದುನೋಡಬೇಕಿದೆ.
ಜಾರಿ ನಿರ್ದೇಶನಾಲಯ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿ ಡಿಕೆಶಿ ಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೆಹಲಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸುರೇಶ್ ಕುಮಾರ್ ಇಂದು ತೀರ್ಪು ನೀಡಲಿದ್ದಾರೆ. ಭೋಜನ ವಿರಾಮದ ಬಳಿಕ ತೀರ್ಪು ಪ್ರಕಟಿಸಲಿದ್ದಾರೆ. ಡಿಕೆಶಿಗೆ ಜಾಮೀನು ದೊರೆತರೆ ತಿಹಾರ್ ಜೈಲಿನಿಂದ ಡಿಕೆಶಿ ಇಂದು ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ