ಬುಧವಾರ ತೀರ್ಪು ಕಾಯ್ದಿರಿಸಿದ್ದ ದೆಹಲಿಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹರ್ 5.10ಕ್ಕೆ ಸರಿಯಾಗಿ ಒಂದೇ ಸಾಲಿನ ಆದೇಶವನ್ನು ಪ್ರಕಟಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಸದ್ಯಕ್ಕೆ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಡಿ.ಕೆ.ಶಿವಕುಮಾರ್ ಅವರು ಮೇಲ್ಮನವಿ ಸಲ್ಲಿಸಬಹುದಾಗಿದೆ. ಆರೋಪಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬಹುದೆಂದು ನ್ಯಾಯಾಧೀಶರು ಸೂಚಿಸಿದ್ದಾರೆ.