ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮುನ್ನ ವಿ. ಎಸ್. ಉಗ್ರಪ್ಪ ಮತ್ತು ಸಲೀಂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ನಡೆಸಿದ ಸಂಭಾಷಣೆ ರಾಜ್ಯ ರಾಜಕೀಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮಾತುಕತೆಯ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ಉಂಟಾಗಿದೆ.
ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಗೆ ತೇಪೆ ಹಚ್ಚೋಕೆ ಪ್ರಯತ್ನಿಸಿದರೆ, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಇದೊಂದು ಡಿಕೆಶಿಯನ್ನು ಮುಗಿಸಲು ಕಾಂಗ್ರೆಸ್‌ನಲ್ಲಿ ಮಾಡಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗ” ಎಂದು ಹೇಳಿದ್ದಾರೆ.