ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ!

Date:

ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ!

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರದ ಮಿನಿ ಸಮರಕ್ಕೆ ಅಖಾಡ ಸಜ್ಜಾಗಿ̧ದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್‌ ಸಂಕಷ್ಟ ಎದುರಾಗಿದೆ. ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಿಜೆಪಿ ಶಾಸಕ ಯತ್ನಾಳ್‌ ಅರ್ಜಿ ವಿಚಾರಣೆ ವೇಳೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿತ್ತು. ಕೋರ್ಟ್ ಅಭಿಪ್ರಾಯ ಕೇಳಿದ್ದ ಹಿನ್ನೆಲೆಯಲ್ಲಿ ಸಿಬಿಐನಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.
ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು. ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತ್ತು.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...