No menu items!
20.3 C
Munich
Monday, June 15, 2026

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

Must read

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಬೆಂಗಳೂರು: “ನನ್ನ ಅಣ್ಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಅಭಿಪ್ರಾಯವನ್ನು ನಾನು ಹಲವು ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ,” ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಸಂಪುಟ ಪುನರ್‌ರಚನೆ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿ, ನಾಯಕತ್ವ ಬದಲಾವಣೆ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್. ಏನಾಗುತ್ತದೆ ಎಂಬುದನ್ನು ಕಾದು ನೋಡೋಣ. ಹೈಕಮಾಂಡ್ ತೀರ್ಮಾನವೇ ಅಂತಿಮ,” ಎಂದರು.

ಬಿಹಾರ ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದ ಡಿಕೆ ಸುರೇಶ್, ಪ್ರಜಾಪ್ರಭುತ್ವದಲ್ಲಿ ಗೆಲುವು–ಸೋಲು ಸಾಮಾನ್ಯ ಎಂದು ಹೇಳಿದರು. ಬಿಹಾರದಲ್ಲೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರಿಂದ ಮಹಿಳಾ ಮತದಾರರು ಎನ್‌ಡಿಎ ಪರ ಹೆಚ್ಚಿನ ಒಲವು ತೋರಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷ ಜನರ ತೀರ್ಪನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. “ಸೋಲು–ಗೆಲುವು ಪಕ್ಷಕ್ಕೆ ಹೊಸದಲ್ಲ. ವಿರೋಧ ಪಕ್ಷದಲ್ಲಿದ್ದರೂ ಸಂಘಟನಾ ಬಲವರ್ಧನೆಗಾಗಿ ಕೆಲಸ ಮುಂದುವರಿಸುತ್ತೇವೆ,” ಎಂದು ಅವರು ಹೇಳಿದರು.

- Advertisement -spot_img

More articles

- Advertisement -spot_img

Latest article