ಡಿಜಿಸಿಎಯಲ್ಲಿ 27 ಹುದ್ದೆಗಳು ಖಾಲಿ ಇವೆ

Date:

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) Consultant ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 3 ಕೊನೆಯ ದಿನವಾಗಿದೆ.

ಒಟ್ಟು 27 Consultant ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆದಿದ್ದು ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿ ನಿಯಮಗಳ ಅನ್ವಯ ಯಾವುದೇ ಪದವಿ, ಇಂಜಿನಿಯರಿಂಗ್ ವಿಷಯದಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 75,000 ರೂ. ವೇತನ ನಿಗದಿ ಮಾಡಲಾಗಿದೆ.

 

ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 19 ಆಗಸ್ಟ್ 2021ಕ್ಕೆ ಅನ್ವಯ ವಾಗುವಂತೆ 63 ವರ್ಷ ಮೀರಿರಬಾರದು. ಕೆಲವು ವರ್ಗದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಕೆ ಮಾಡಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಅರ್ಜಿಗಳನ್ನು ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸೆಪ್ಟೆಂಬರ್ 3ರೊಳಗೆ ತಲುಪುವಂತೆ ಸಲ್ಲಿಸಬೇಕು. Recruitment Section, Directorate General of Civil Aviation, Opp. Safdarjung Airport, Aurobindo Marg, New Delhi – 110003.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...