ಡಿಬಾಸ್ ಮನವಿಗೆ ಅಭಿಮಾನಿಗಳು ಕೊಟ್ರು ಲಕ್ಷಲಕ್ಷ!

0
66

ಕೊರೊನಾ ಬಿಕ್ಕಟ್ಟಿನಿಂದ ಜನಸಾಮಾನ್ಯರಿಗೆ ತೊಂದರೆಯಾದಂತೆ ಪ್ರಾಣಿಗಳಿಗೂ ಅಷ್ಟೇ ತೊಂದರೆ ಉಂಟಾಗಿದೆ. ಒಂದುವರೆ ವರ್ಷದಿಂದ ಮೃಗಾಲಯಗಳಲ್ಲಿ ಪ್ರಾಣಿಗಳ ಪೋಷಣೆ ಕಷ್ಟವಾಗಿದೆ. ಅದನ್ನು ನಂಬಿ ಜೀವನ ಸಾಗಿಸುತ್ತಿರುವ ಸಿಬ್ಬಂದಿಗಳ ಬದುಕು ಕಷ್ಟಕರವಾಗಿದೆ. ಹಾಗಾಗಿ, ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯುವುದರ ಮೂಲಕ ನೆರವಾಗಬಹುದು ಎಂದು ನಟ ದರ್ಶನ್ ವಿನಂತಿಸಿದ್ದರು.

ಖುದ್ದು ಪ್ರಾಣಿಪ್ರಿಯರಾಗಿರುವ ದಾಸ ದರ್ಶನ್ ಮನವಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ದರ್ಶನ್ ಅಭಿಮಾನಿಗಳು ಹಾಗೂ ಪ್ರಾಣಿಪ್ರಿಯರು ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿಯೂ ದತ್ತು ಪಡೆಯುವುದರ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ಡಿ ಬಾಸ್ ಮನವಿ ನಂತರ ಕೇವಲ ಎರಡು ದಿನದಲ್ಲಿ 25 ಲಕ್ಷ ಮೌಲ್ಯದ ದತ್ತು ಹಣ ಸಂಗ್ರಹವಾಗಿದೆ ಎಂದು ಕರ್ನಾಟಕ ಮೃಗಾಲಯ ಮಾಹಿತಿ ನೀಡಿದೆ. ಮುಂದೆ ಓದಿ…

ಕರ್ನಾಟಕದಲ್ಲಿ ಒಟ್ಟು 9 ಮೃಗಾಲಯಗಳಿವೆ. ಬೆಳಗಾವಿ, ಗದಗ, ಕಲುಬುರ್ಗಿ, ದಾವಣಗೆರೆ, ಹಂಪಿ, ಚಿತ್ರದುರ್ಗ, ಬನ್ನೇರುಘಟ್ಟ, ಶಿವಮೊಗ್ಗ, ಮೈಸೂರಿನಲ್ಲಿ ಮೃಗಾಲಯಗಳಿವೆ. ದರ್ಶನ್ ಮನವಿಯ ನಂತರ ಈ ಒಂಬತ್ತು ಮೃಗಾಲಯಗಳಿಂದಲೂ 25 ಲಕ್ಷ ಮೌಲ್ಯದ ದತ್ತು ಸ್ವೀಕಾರ ಹಾಗೂ ದೇಣಿಗೆ ಸಂಗ್ರಹವಾಗಿದೆ ಎಂದು ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here