ಡಿಸೆಂಬರ್ 8ರಿಂದ ರಾಜ್ಯಾದ್ಯಂತ 3 ದಿನಗಳ ಕಾಲ ಮದ್ಯ ಮಾರಾಟ ಬಂದ್!

Date:

ಬರೋಬ್ಬರಿ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿರುವುದು ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. 

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಬಂದ್ನಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.  

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ (vote counting) ನಡೆದು, ಫಲಿತಾಂಶ ಹೊರ ಬೀಳಲಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...