ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಜೈಲು ಪಾಲಾಗಿದೆ. ದರ್ಶನ್ ಭೇಟಿಗೆ ಅನೇಕ ಮಂದಿ ಪ್ರಯತ್ನಪಟ್ಟರೂ ಕೆಲವೊಬ್ಬರಿಗಷ್ಟೇ ಭೇಟಿಗೆ ಅವಕಾಶ ನೀಡಲಾಗ್ತಿದೆ. ನಿನ್ನೆ ನಟ ಸಾಧುಕೋಕಿಲ ಕೂಡ ದರ್ಶನ್ ಭೇಟಿಗೆ ಹೋಗಿ ನಿರಾಸೆಯಿಂದ ವಾಪಸ್ ಆಗಿದ್ದರು.
ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ , ಹಾಗೂ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ.
ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು. ಈ ಸಂದರ್ಭದಲ್ಲಿ ತಾವು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಡಿ.ಕೆ.ಶಿವಕುಮಾರ್ ದರ್ಶನ್ ಅಭಿಮಾನಿಗಳಿಗೆ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಬಂದಿದ್ದಾರೆ ಎನ್ನಲಾಗುತ್ತಿದೆ.
ಡಿ.ಕೆ.ಶಿವಕುಮಾರ್ ನಿವಾಸಕ್ಕೆ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ
Date: