ನಿರ್ಮಲಾನಂದ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಮುಖಂಡರು, ಕಾರ್ಯಕರ್ತರು ರಾಮನಗರದ ಒಕ್ಕಲಿಗ ಭವನ ಲೋಕಾರ್ಪಣೆ ಸಂದರ್ಭದಲ್ಲಿ ಭಾಗಿಯಾಗಿದ್ದರು.
ಇದೇ ವೇಳೆ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಈಗಾಗಲೇ ರಾಮನಗರದಲ್ಲಿ ಮೂರು ಜನ ಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ . ಮುಂದೆ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿಯಾಗುತ್ತಾರೆ ಎಂದರು. ಇದಕ್ಕೆ ದನಿಗೂಡಿಸಿದ ನಂಜಾವಧೂತ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಒಬ್ಬ ಬಲಿಷ್ಠ ವ್ಯಕ್ತಿ. ಅವರ ಹಿಂದೆ ಜನ ಇದ್ದಾರೆ. ಮುಂದೆ ಸಿಎಂ ಆಗುತ್ತಾರೆ ಎಂದಿದ್ದಾರೆ.