ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆದ ಹಾದಿಯುದ್ದಕ್ಕೂ ಅಂಗಡಿಮುಗ್ಗಟ್ಟುಗಳು ಸ್ವಯಂ ಪ್ರೇರಣೆಯಿಂದ ಮುಚ್ಚಲ್ಪಟ್ಟಿದ್ದವು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಬಂಧನದ ಹಿಂದೆ ರಾಜಕೀಯ ದುರದ್ದೇಶವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಗರದ ರಾಜಾಜಿನಗರದಿಂದ ನೂರಾರು ಸಂಖ್ಯೆಯಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು 110 ವಾಹನಗಳಲ್ಲಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತೆರಳಿ ನಂತರ ಫ್ರೀಡಂಪಾರ್ಕ್‍ವರೆಗೂ ರ್ಯಾಲಿಯಲ್ಲಿ ಆಗಮಿಸಿದರು.
ಮುಂಜಾಗ್ರತಾ ಕ್ರಮವಾಗಿ ಸುಮಾರು 2000ಕ್ಕೂ ಹೆಚ್ಚುಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಬಲವಂತವಾಗಿ ಯಾವುದೇ ಅಂಗಡಿಮುಂಗಟ್ಟುಗಳನ್ನು ಬಂದ್ ಮಾಡಿಸಬಾರದೆಂದು ಪೊಲೀಸರು ಸೂಚನೆ ನೀಡಿದ್ದರು