ಡು ಪ್ಲೆಸಿಸ್ ಮತ್ತು ಪತ್ನಿಗೆ ಕೊಲೆ ಬೆದರಿಕೆಗಳು!

Date:

ಕ್ರಿಕೆಟ್ ಪಂದ್ಯಗಳು ವೀಕ್ಷಕರ ಮೇಲೆ ಎಷ್ಟು ಪರಿಣಾಮ ಬೀರುತ್ತವೆ ಎಂದರೆ ಕೆಲವೊಮ್ಮೆ ಈ ಥರದ ಅಭಿಮಾನಿಗಳೂ ಇರುತ್ತಾರಾ ಎನ್ನುವ ಮಟ್ಟಿಗೆ ಕ್ರಿಕೆಟ್ ಅಭಿಮಾನಿಗಳು ಅತಿಯಾಗಿ ವರ್ತಿಸಿಬಿಡುತ್ತಾರೆ. 2007ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ರಾಹುಲ್ ದ್ರಾವಿಡ್ ಅವರ ನಾಯಕತ್ವದಲ್ಲಿ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನೇನೂ ನೀಡದಿದ್ದಾಗ ದ್ರಾವಿಡ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು, ಅಷ್ಟೇ ಯಾಕೆ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ ಯಾವ ಪಂದ್ಯವನ್ನು ಸೋತರೂ ಸಹ ಪಾಕಿಸ್ತಾನದಲ್ಲಿ ಅಭಿಮಾನಿಗಳು ದೂರದರ್ಶನಗಳನ್ನು ಒಡೆದು ಹಾಕುವುದನ್ನು ನೀವು ನೋಡಿರುತ್ತೀರಿ ಮತ್ತು ಕಳೆದ ಬಾರಿಯ ಐಪಿಎಲ್ ಟೂರ್ನಿ ವೇಳೆ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿದಾಗ ಸಾಮಾಜಿಕ ಜಾಲತಾಣದಲ್ಲಿ ಧೋನಿ ಕುಟುಂಬದ ಕುರಿತು ಕೆಳಮಟ್ಟದಲ್ಲಿ ಅಭಿಮಾನಿಗಳು ಟ್ರೋಲ್ ಮಾಡಿದ್ದನ್ನು ಸಹ ನೀವು ನೋಡಿರುತ್ತೀರಿ.

 

ಹೀಗೆ ಅಭಿಮಾನಿಗಳು ತಮ್ಮ ದೇಶ ಮತ್ತೊಂದು ದೇಶದ ವಿರುದ್ಧ ಸೋತಾಗ ಮತ್ತು ತಮ್ಮ ನೆಚ್ಚಿನ ತಂಡ ಸೋತಾಗ ಒಮ್ಮೊಮ್ಮೆ ತೀವ್ರವಾಗಿ ವರ್ತಿಸಿಬಿಡುತ್ತಾರೆ. ಅದರಲ್ಲಿಯೂ ವಿಶ್ವಕಪ್ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಾಗಂತೂ ಆಟಗಾರರುಗಳಿಗೆ ಜೀವ ಬೆದರಿಕೆಗಳು ಬಂದ ಕೆಲವೊಂದಷ್ಟು ಉದಾಹರಣೆಗಳಿವೆ. ಇದೀಗ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಕೂಡ ತಮಗೆ ಈ ಹಿಂದೆ ಆಗಿದ್ದ ಇದೇ ರೀತಿಯ ಅನುಭವವೊಂದನ್ನು ಬಿಚ್ಚಿಟ್ಟಿದ್ದಾರೆ.

 

2011ರ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ 49 ರನ್‌ಗಳಿಂದ ಸೋಲುವುದರ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಈ ಪಂದ್ಯ ಮುಗಿದ ನಂತರ ದಕ್ಷಿಣ ಆಫ್ರಿಕಾದ ಆಟಗಾರರ ವಿರುದ್ಧ ದಕ್ಷಿಣ ಆಫ್ರಿಕಾದ ಕ್ರೀಡಾಭಿಮಾನಿಗಳು ದೊಡ್ಡ ಮಟ್ಟದಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈ ಪಂದ್ಯದಲ್ಲಿ 43 ಎಸೆತಗಳಲ್ಲಿ 36 ರನ್ ಗಳಿಸಿ ಹೋರಾಟ ನಡೆಸಿದ್ದ ಫಾಫ್ ಡು ಪ್ಲೆಸಿಸ್ ವಿರುದ್ಧ ತುಸು ಹೆಚ್ಚೇ ಆಕ್ರೋಶ ವ್ಯಕ್ತವಾಗಿತ್ತು.

 

ಇದೀಗ ಆ ಘಟನೆಯ ಕುರಿತು ಮೆಲುಕು ಹಾಕಿರುವ ಫಾಫ್ ಡು ಪ್ಲೆಸಿಸ್ ಆ ಪಂದ್ಯ ಮುಗಿದ ಬಳಿಕ ತನಗೂ ಮತ್ತು ತನ್ನ ಪತ್ನಿಗೂ ಕೊಲೆ ಬೆದರಿಕೆಯ ಕರೆಗಳು ಬಂದಿದ್ದವು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ಹೌದು ನ್ಯೂಜಿಲೆಂಡ್ ತಂಡದ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋತ ಬಳಿಕ ಈ ರೀತಿಯ ಬೆದರಿಕೆ ಕರೆಗಳು ಬಂದಿದ್ದವು ಎಂದು ಸ್ವತಃ ಡ್ಯುಪ್ಲೆಸಿಸ್ ಅವರೇ ಇತ್ತೀಚೆಗೆ ಹೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...