ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಡೆಂಗ್ಯೂಗೆ ಸಾವು ಕೂಡ ಆತಂಕ ಮೂಡಿಸುತ್ತಿದೆ. ಇದರ ಬೆನ್ನಲ್ಲೇ ಬಾಲಕಿಯೊಬ್ಬಳು ಡೆಂಗ್ಯೂ ಮಹಾಮಾರಿಗೆ ಸಾವನ್ನಪ್ಪಿದ್ದಾಳೆ. ಹೌದು ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಸರ್ಕಾರಕ್ಕೆ ಮೃತ ಬಾಲಕಿ ತಂದೆ ಮನವಿ ಮಾಡಿದ್ದಾರೆ. ಡೆಂಗ್ಯೂ ಜ್ವರಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸ ಸಿಗುತ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವು.!
Date: