ಹಾಸನ: ಹಾಸನ ಜಿಲ್ಲೆಯಲ್ಲಿ ಮಾರಕ ಡೆಂಗ್ಯೂ ಮಹಾಮಾರಿ ಆರ್ಭಟ ಮುಂದುವರಿದಿದೆ. ಶಂಕಿತ ಡೆಂಗ್ಯೂಗೆ ಮತ್ತೊಂದು ಬಾಲಕಿ ಬಲಿಯಾಗಿದ್ದಾಳೆ. ಸಮೃದ್ಧಿ (8) ಮೃತಪಟ್ಟ ಬಾಲಕಿಯಾಗಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಾಳೆ.ಇದರಿಂದ, ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುವಿಗೆ ನಾಲ್ವರು ಬಾಲಕಿಯರು ಬಲಿಯಾದಂತಾಗಿದೆ.
ಡೆಂಗ್ಯೂ ಮಹಾಮಾರಿ ಆರ್ಭಟ: ಮತ್ತೊಂದು ಬಾಲಕಿ ಬಲಿ
Date: