ಡೆತ್ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ಬೆಂಗಳೂರು: ಡೆತ್ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಿಕೆ ಅಚ್ಚುಕಟ್ಟುವಿನಲ್ಲಿ ನಡೆದಿದೆ. ಗಾಂಧಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಇಂದು ಬೆಳಗ್ಗೆ ತಂದೆ ಪುತ್ರನ ರೂಮ್ಗೆ ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಡೆತ್ನೋಟ್ನಲ್ಲಿ ನನ್ನನ್ನು ಕ್ಷಮಿಸು ಎಂದು ಬರೆದಿದ್ದಾನೆ. ತಕ್ಷಣವೇ ಅವರು ಮಗನನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಷ್ಟರಲ್ಲಿ ಆತನ ಉಸಿರು ನಿಂತಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ಆರಂಭಿಸಿದ್ದಾರೆ.