ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು

Date:

ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಬಾಯ್‌ಫ್ರೆಂಡ್‌ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು (ಸೆಪ್ಟೆಂಬರ್ 30) ಬೆಳಗ್ಗೆ ಬಾಯ್‌ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್‌ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್‌ನೋಟ್‌ನಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಮೂಲತಃ ಕೊಡಗಿನ ಕುಶಾಲನಗರದವರಾಗಿದ್ದ ಸೌಜನ್ಯ ಕನ್ನಡದ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದಾರಂತೆ. ಸೀರಿಯಲ್ ಜೊತೆಗೆ ಚೌಕಟ್ಟು ಹಾಗೂ ಫನ್ ಎಂಬ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...