ಡೆಲ್ಟಾ ಪ್ಲಸ್ ಸಾಮಾನ್ಯದ್ದಲ್ಲ; ಬಿತ್ತು ಮೊದಲ ಬಲಿ

0
46

ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್‌ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಮೂರು ಪ್ರಕರಣಗಳು ಭೋಪಾಲ್‌ನಲ್ಲಿ ಪತ್ತೆಯಾಗಿದ್ದರೆ ಎರಡು ಪ್ರಕರಣಗಳು ಉಜ್ಜಯಿನಿಯಲ್ಲಿ ದೃಢಪಟ್ಟಿದೆ.


ಡೆಲ್ಟಾ ಪ್ಲಸ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪತಿಗೆ ಮೊದಲು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು, ಬಳಿಕ ಮಹಿಳೆಗೆ ಸೋಂಕು ತಾಗಿದೆ, ಮಹಿಳೆಯ ಪತಿ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದಾರೆ, ಆದರೆ ಮಹಿಳೆ ಇದುವರೆಗೂ ಲಸಿಕೆ ಪಡೆದಿಲ್ಲ.
ಈ ಬಗ್ಗೆ ಹೇಳಿಕೆ ನೀಡಿರುವ ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್, ಸರ್ಕಾರವು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದೆ, ಡೆಲ್ಟಾ ಪ್ಲಸ್ ಸೋಂಕು ತಾಗಿದ ರೋಗಿಗಳ ಸಂಪರ್ಕಕ್ಕೆ ಬಂದವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದರು.


ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚು ಕಂಡುಬರುತ್ತಿತ್ತು,ಈ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ, ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ತಿಳಿಸಲಾಗಿದೆ.
ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ 6, ಕೇರಳದಲ್ಲಿ 3 ಪ್ರಕರಣಗಳು, ತಮಿಳುನಾಡಿನಲ್ಲಿ ಮೂರು ಪ್ರಕರಣಗಳು, ಕರ್ನಾಟಕದಲ್ಲಿ 2 ಪ್ರಕರಣಗಳು, ಪಂಜಾಬ್, ಆಂಧ್ರಪ್ರದೇಶ ಹಾಗೂ ಜಮ್ಮುವಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಡೆಲ್ಟಾ ಪ್ಲಸ್ ಪ್ರಕರಣಗಳು ಮಹಾರಾಷ್ಟ್ರದ ರತ್ನಗಿರಿ, ಜಲಗಾಂವ್, ಕೇರಳದ ಪಾಲಕ್ಕಾಡ್, ಪಟ್ಟಣಂತಿಟ್ಟ, ಮಧ್ಯಪ್ರದೇಶದ ಭೋಪಾಲ್ ಮತ್ತು ಶಿವಪುರಿಯಲ್ಲಿ ಪತ್ತೆಯಾಗಿದೆ.
ದೇಶದ ಮೂರು ರಾಜ್ಯಗಳಲ್ಲಿ ಇದುವರೆಗೆ ಪತ್ತೆಯಾದ ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರವನ್ನು ಕೇಂದ್ರ ಆರೋಗ್ಯ ಸಚಿವಾಲಯವು ಕಾಳಜಿಯ ರೂಪಾಂತರವೆಂದು ವರ್ಗೀಕರಿಸಿದೆ. ರೂಪಾಂತರ ಪತ್ತೆಯಾದ ಕ್ಲಸ್ಟರ್‌ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯಗಳಿಗೆ ನಿರ್ದೇಶಿಸಲಾಗಿದೆ.

LEAVE A REPLY

Please enter your comment!
Please enter your name here