ಡೆಲ್ಲಿ ಕ್ಯಾಪಿಟಲ್ಸ್ ಗೆ ಶ್ರೇಯಸ್ ಅಯ್ಯರ್ ಬದಲು ಬೇರೆ ನಾಯಕ ಆಯ್ಕೆ

Must read

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವ ಸಮಯದಲ್ಲಿ ಶ್ರೇಯಸ್ ಅಯ್ಯರ್ ಅವರು ಗಾಯಕ್ಕೆ ಒಳಗಾಗಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗೆ ವಿಪರೀತವಾಗಿ ಗಾಯ ಆಗಿದ್ದು ಮೂಳೆ ಜರುಗಿರುವುದು ತಿಳಿದುಬಂದಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಅರ್ಧ ಅವಧಿಯವರೆಗೆ ಶ್ರೇಯಸ್ ಅಯ್ಯರ್ ಅವರು ಅಲಭ್ಯರಾಗಲಿದ್ದಾರೆ.

 

 

 

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಐಪಿಎಲ್ ಆಡುವುದು ಅನುಮಾನವಾದ ಬಳಿಕ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪರ್ಯಾಯ ನಾಯಕ ಯಾರು ಎಂಬ ಚರ್ಚೆ ಶುರುವಾಗಿದೆ. ಅಶ್ವಿನ್ , ಸ್ಟೀವ್ ಸ್ಮಿತ್ ಅವರ ಹೆಸರುಗಳು ಕೇಳಿ ಬರುತ್ತಿದ್ದರೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಬ್ ಪಂತ್ ಅವರು ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಮಾಹಿತಿಯನ್ನ ಬಲ್ಲ ಮೂಲಗಳು ನೀಡುತ್ತಿವೆ.

- Advertisement -spot_img

More articles

- Advertisement -spot_img

Latest article