ಬೆಂಗಳೂರು: ನಮ್ಮದೇನಿದ್ದರೂ ಮೇಕಪ್ ಹಾಕೋದು ಸಿನಿಮಾ ಮಾಡೋದು. ರಾಜಕೀಯ ನಮಗೆ ಬೇಡ ಎಂದು ನಟ ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಲೋಕಸಭೆಗೆ ರೆಡಿಯಾಗಿ ಅಂತಾ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ತಂದೆ ಕೊಟ್ಟಿರುವ ಬಳುವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ.
ನಮ್ಮದೇನಿದ್ದರೂ ಮೇಕಪ್ ಹಾಕೋದು ಸಿನಿಮಾ ಮಾಡೋದು. ರಾಜಕೀಯ ನಮಗೆ ಬೇಡ ಎಂದರು. ಬಂಗಾರಪ್ಪ ಮಗಳು ನಮ್ಮ ಮನೆ ಸೊಸೆ. ಗೀತಾಳಿಗೆ ಇಂಟರೆಸ್ಟ್ ಇದ್ರೆ ಮಾಡ್ಲಿ. ಹೆಂಡತಿ ಇಷ್ಟಪಟ್ಟರೆ ಅವರಿಗೆ ಸಪೋರ್ಟ್ ಮಾಡೋದು ಗಂಡನ ಕೆಲಸ. ಗೀತಾ ಇಷ್ಟಪಟ್ರೆ ಚುನಾವಣೆಗೆ ಸಪೋರ್ಟ್ ಮಾಡ್ತೀವಿ ಎಂದು ತಿಳಿಸಿದರು.
ತಂದೆ ಕೊಟ್ಟಿರುವ ಬಳುವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ !
Date: