ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉತ್ಸವದ ತಯಾರಿ ಭರ್ಜರಿಯಾಗಿ ನಡೆದಿದೆ. ಮೈಸೂರು ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಈ ನಡುವೆ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಅಡಿಷನಲ್ ಎಸ್‌ಪಿ ನಾಗೇಶ್ ಹಾಗೂ ಡಿವೈಎಸ್‌ಪಿ ಕರೀಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತಡರಾತ್ರಿ ಪಾರ್ಟಿ ಮಾಡುತಿದ್ದ ವೇಳೆ ದಿಢೀರ್ ದಾಳಿ ಮಾಡಿ 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ.
ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ
Date: