No menu items!
18.4 C
Munich
Friday, August 21, 2026

ತನಿಖೆಗೆ ಆದೇಶಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ

Must read

ಬೆಂಗಳೂರು: ಮತದಾನ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹಾರಿದ್ದಾರೆ. ಎಲೆಕ್ಷನ್ ಸಮಯದಲ್ಲಿ ಪ್ರಕರಣ ದೊಡ್ಡ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ ಫ್ರಂಕ್‌ಫರ್ಟ್‌ಗೆ ತೆರಳಿದ ಮಾಹಿತಿ ಲಭ್ಯವಾಗಿದೆ.


ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article