ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ನಾಡಿನ ಜನರಿಗೆ ಗೊತ್ತಾಗಲಿದೆ: ಸೂರಜ್ ರೇವಣ್ಣ

By
1 Min Read

ಹಾಸನ: ಸರ್ಕಾರ ರಚಿಸಿರುವ ಎಸ್ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ, ಆದರೆ ಇದೊಂದು ಷಡ್ಯಂತ್ರ ಅಂತ ಹೇಳಬಲ್ಲೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಭಂಧಿಸಿದಂತೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಳೆದ ಕೆಲ ದಶಕಗಳಿಂದ ಹೆಚ್ ಡಿ ರೇವಣ್ಣ ಅವರು ಈ ಭಾಗದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ, ಅದನ್ನು ಸಹಿಸದ ಜನ ಇಂಥದನ್ನೆಲ್ಲ ಮಾಡುತ್ತಿದ್ದಾರೆ ಎಂದು ಹೇಳಿದರು.
ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ನಾಡಿನ ಜನರಿಗೆ ಗೊತ್ತಾಗಲಿದೆ ಎಂದು ಅವರು ಹೇಳಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಾನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ನಿಜ ಅದರೆ ಅದು ಜನವರಿಯಲ್ಲಿ, ಕಳೆದ ಒಂದೂವರೆ ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರಿಂದ ಬೆಂಗಳೂರಿಗೆ ಹೋಗಲು ಕೂಡ ಸಾಧ್ಯವಾಗಿಲ್ಲ ಎಂದು ಸೂರಜ್ ರೇವಣ್ಣ ಹೇಳಿದರು.

Share This Article