ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಇಂದು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತಾವು ವಿಪಕ್ಷ ನಾಯಕರಾಗಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಭಾವಿಯಾಗಿರುವ ಲಿಂಗಾಯಿತ ಸಮುದಾಯಕ್ಕೆ ನೀಡುವುದು ಸೂಕ್ತ ಎಂಬ ಸಲಹೆ ನೀಡಿದ್ದಾರೆ.
ಉಪ ಚುನಾವಣೆಯಲ್ಲಿ ಹಿರಿಯ ನಾಯಕರು ತಮ್ಮೊಂದಿಗೆ ಸಹಕರಿಸಿದ್ದರೆ ಕನಿಷ್ಠ 10 ಸ್ಥಾನಗಳನ್ನು ಗೆಲ್ಲಲು ಸಾಧ್ಯವಿತ್ತು. ಆದರೆ, ರಾಜಕೀಯ ಕಾರಣಗಳಿಗಾಗಿ ಎಲ್ಲಾ ನಾಯಕರು ಉಪ ಚುನಾವಣೆ ವೇಳೆ ಪ್ರಚಾರದಿಂದ ದೂರ ಸರಿದರು. ಕೊನೆ ಕ್ಷಣದಲ್ಲಿ ನೆಪಮಾತ್ರಕಷ್ಟೇ ಪ್ರಚಾರಕ್ಕೆ ಆಗಮಿಸಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ನಾವು ಸೋಲುವಂತಾಯಿತು ಎಂದು ಸಿದ್ದರಾಮಯ್ಯ ಹೈಕಮಾಂಡ್‍ಗೆ ವರದಿ ನೀಡಿದ್ದಾರೆ.