ತಲ್ವಾರ್ ನಿಂದ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ!

Date:

ತಲ್ವಾರ್ ನಿಂದ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ!

ಮಂಗಳೂರು: ಕರಾವಳಿ ಯಲ್ಲಿ ಮತ್ತೆ ರಕ್ತದ ದೋಕಲಿ ಹರಿದಿದೆ. ಇದರಿಂದ ಜನರು ಬೆಚ್ಚಿ ಬಿದ್ದಿದ್ದಾರೆ. ಹೌದು ತಲ್ವಾರ್ ನಿಂದ ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ ನಡೆದಿರುವ ಘಟನೆ ಮಂಗಳೂರಿನಲ್ಲಿ ಜರುಗಿದೆ.

ಬಜಪೆಯ ಕಿನ್ನಿಪದವು ಬಳಿ ಘಟನೆ ಜರುಗಿದ್ದು, ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ಸುಮಾರು 10 ಮಂದಿ ಸೇರಿ ತಲವಾರಿನಿಂದ ಹತ್ಯೆ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್‌ ಶೆಟ್ಟಿಗೆ ಜೈಲಿನಿಂದ ಹೊರ ಬಂದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಸುಹಾಸ್‌ ಶೆಟ್ಟಿಯನ್ನು ಸ್ಥಳೀಯರು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್‌ ಶೆಟ್ಟಿ ಮೃತಪಟ್ಟಿದ್ದು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...