ಬೆಂಗಳೂರು: ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ಗೆಲುವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಮತ್ತು ಚಾಮರಾಜನಗರದ ಪ್ರವಾಸ ಕೈಗೊಂಡಿದ್ದಾರೆ. ತವರು ಜಿಲ್ಲೆ ಮೈಸೂರು ಹಾಗೂ ಚಾಮರಾಜನಗರ ಚುನಾವಣಾ ಪ್ರಚಾರದ ಅಖಾಡಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಇಳಿದಿದ್ದಾರೆ.
ಎರಡೂ ಕ್ಷೇತ್ರಗಳನ್ನ ಮರಳಿ ಪಡೆಯಲು ಸ್ಥಳೀಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಎರಡೂ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಬೇಕಾದ ಮಾನದಂಡಗಳ ಬಗ್ಗೆ ಚರ್ಚಿಸಿದ್ದಾರಂತೆ. ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ವಿರುದ್ಧ ಸ್ಪರ್ಧಿಸಿರುವ ಲಕ್ಷ್ಮಣ್ ಗೆಲ್ಲಿಸಿಕೊಳ್ಳಲು ಒಕ್ಕಲಿಗ ಮತಗಳನ್ನ ಸೆಳೆಯಲು ಭಾರೀ ರಣತಂತ್ರ ರೂಪಿಸಿದ್ದಾರೆ.
ಇನ್ನು ಏ.3ಕ್ಕೆ ಬೆಳಗ್ಗೆ 9:30ಕ್ಕೆ ಸುತ್ತೂರು ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬೆಳಗ್ಗೆ 10:35ಕ್ಕೆ ಚಾಮರಾಜನಗರ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಏ.3ಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆಯಲ್ಲೂ ಸಿಎಂ ಪಾಲ್ಗೊಳ್ಳಲಿದ್ದಾರೆ.
ತವರು ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ: ಇಂದಿನಿಂದ 3 ದಿನ ಪ್ರವಾಸ
Date:






