ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ !

Date:

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಮುಸ್ಲಿಂ ಮೂಲಭೂತವಾದಿಗಳು ಗಲಾಟೆ ಮಾಡುತ್ತಿದ್ದಾರೆ.
ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ. ಎಫ್ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ ಎಂದರು.
ಜೈಕಾರದ ಸುದ್ದಿ ಮಾಧ್ಯಮಗಳಲ್ಲಿ ಬಂದು ಜನರಿಗೆ ಗೊತ್ತಾದರೂ ಜನರ ಕಣ್ಣಿಗೆ ಮಣ್ಣೆರಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹೀಗೆಯೇ ಬಿಟ್ಟರೆ ವಿಧಾನಸೌಧ ಕೂಡ ಭಯೋತ್ಪಾದಕರ ತಾಣವಾಗಲಿದೆ. ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ವಿಧಾನಸೌಧವನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ.
ಸರ್ಕಾರದ ಕೆಲಸ ದೇವರ ಕೆಲಸ ಎಂದರೆ, ಈ ಸರ್ಕಾರ ಅದಕ್ಕೆ ಅಪಮಾನ ಮಾಡುತ್ತಿದೆ. ಈ ಪ್ರಕರಣ ಮುಚ್ಚಿಹಾಕಿ ದೇಶದ್ರೋಹಿಗಳಿಗೆ ರಕ್ಷಣೆ ನೀಡುವ ಇವರು ಭಂಡರು ಎಂದರು.ಆದ್ದರಿಂದ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಜನರು ಇದನ್ನು ಮನಗಾಣಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...