ಹೆಚ್ ಡಿ ಕುಮಾರಸ್ವಾಮಿ ಕುಟುಂಬ ವರ್ಗದಿಂದ ಖುಷಿ ಸುದ್ದಿಯೊಂದು ಹೊರಬಿದ್ದಿದ್ದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಅಜ್ಜ ಆಗುತ್ತಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.
ಹೌದು ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ದಂಪತಿ ತಂದೆ ತಾಯಿ ಆಗುತ್ತಿದ್ದಾರೆ. ಇದು ರೇವತಿಯವರ ಹುಟ್ಟುಹಬ್ಬದ ಪ್ರಯುಕ್ತ ವಿಕಲಚೇತನರಿಗೆ ಉಚಿತ ಬೆಡ್ ಶೀಟ್ ಮತ್ತು ಬಟ್ಟೆ ವಿತರಣೆ ಮಾಡಿದ ನಿಖಿಲ್ ಕುಮಾರಸ್ವಾಮಿ ರೇವತಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ರೇವತಿ ಅವರ ಹುಟ್ಟುಹಬ್ಬದ ದಿನದಂದೇ ಹೆಚ್ಡಿ ಕುಮಾರಸ್ವಾಮಿಯವರು ಖುಷಿಯ ವಿಚಾರವೊಂದನ್ನು ಖಾಸಗಿ ಮಾಧ್ಯಮದವರ ಜೊತೆ ಹಂಚಿಕೊಂಡಿದ್ದು ತಮ್ಮ ಸೊಸೆ ರೇವತಿ 5 ತಿಂಗಳ ಗರ್ಭಿಣಿ ಎಂದು ಹೇಳಿಕೆ ನೀಡಿದ್ದಾರೆ.
ಹೌದು ನಿಖಿಲ್ ಪತ್ನಿ ರೇವತಿ ಐದು ತಿಂಗಳ ಗರ್ಭಿಣಿಯಾಗಿದ್ದು ಈ ವಿಷಯವನ್ನು ಹೆಚ್ಡಿ ಕುಮಾರಸ್ವಾಮಿಯವರು ಮಾಧ್ಯಮದವರ ಜೊತೆ ಹಂಚಿಕೊಂಡಿದ್ದಾರೆ. ಈ ಮೂಲಕ ದೇವೇಗೌಡರ ಕುಟುಂಬಕ್ಕೆ ಮತ್ತೊಂದು ಜೀವದ ಆಗಮನಕ್ಕೆ ಮಾಸ ಗಣನೆ ಆರಂಭವಾಗಿದೆ.