No menu items!
13.9 C
Munich
Wednesday, April 29, 2026

ತಾಪಮಾನ ಹೆಚ್ಚಳ – ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರ ಆಗ್ರಹ !

Must read

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳದಿಂದ ರಾಜಧಾನಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ.

ಅಲ್ಲದೇ ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರು ಆಗ್ರಹಿಸಿದ್ದಾರೆ.

ಈ ಕುರಿತು ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದಿದೆ. ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ದಣಿವಾಗುತ್ತಿದೆ. ಕೆಲವರಿಗೆ ಕೆಲಸದ ವೇಳೆ ಆಯಾಸ, ತಲೆತಿರುಗುವಿಕೆ ಸಮಸ್ಯೆ ಕಾಣಿಸಿಕೊಂಡಿದೆ.

ಪೌರಕಾರ್ಮಿಕರು ಬೆಳಿಗ್ಗೆ 6 ಗಂಟೆಗೆ ಕೆಲಸ ಪ್ರಾರಂಭಿಸುತ್ತಾರೆ. ಪ್ರತಿದಿನ ಮಧ್ಯಾಹ್ನ 2 ಗಂಟೆಯವರೆಗೆ ಕೆಲಸ ಮಾಡುತ್ತಾರೆ. ಕೆಲವೊಮ್ಮೆ ಇದನ್ನು ಮಧ್ಯಾಹ್ನ 2.30 ರವರೆಗೆ ವಿಸ್ತರಿಸಲಾಗುತ್ತದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಧ್ಯಾಹ್ನ 11ರಿಂದ 3 ಗಂಟೆಯ ಅವಧಿಯಲ್ಲಿ ಮನೆಯೊಳಗೆ ಇರಲು ಸೂಚನೆ ನೀಡಿರುವುದನ್ನು ಉಲ್ಲೇಖಿಸಿ, ಕೆಲಸದ ಸಮಯವನ್ನು ಬೆಳಿಗ್ಗೆ 11 ಕ್ಕೆ ಕಡಿತಗೊಳಿಸಬೇಕೆಂದು ಒಕ್ಕೂಟ ಮನವಿ ಮಾಡಿದೆ.

- Advertisement -spot_img

More articles

- Advertisement -spot_img

Latest article