ಕೇವಲ ಅಧಿಕಾರಕ್ಕಾಗಿ, ಸಚಿವ ಸ್ಥಾನಕ್ಕಾಗಿ ಶಾಸಕ ಸ್ಥಾನವನ್ನ ವ್ಯಾಪಾರಕ್ಕೆ ಇಟ್ಟರೆ, ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವೇ? ಎಂದು ಆತಂಕ ವ್ಯಕ್ತಪಡಿಸಿದರು. ಯಾವ ವ್ಯಕ್ತಿಗಳಿಗೆ ಪಕ್ಷದ ಟಿಕೆಟ್ ನೀಡಿ, ನಮ್ಮ ಕಾರ್ಯಕರ್ತರು ಬೆವರು ಸುರಿಸಿ ಪ್ರಚಾರ ಮಾಡಿ, ಆ ಕ್ಷೇತ್ರದಿಂದ ಅವರನ್ನು ಗೆಲ್ಲಿಸಿ ಕಳಿಸಲಾಗಿತ್ತೊ ಅದೇ ವ್ಯಕ್ತಿಗಳು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ತಾಯಿಗೆ ದ್ರೋಹ ಮಾಡುವುದಕ್ಕಿಂತಲೂ ನೀಚ ಕೆಲಸ ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ .
ಭ್ರಷ್ಟಾಚಾರ ಮಾಡಿ ಕೋಟಿ ಕೋಟಿ ಹಣ ಕೊಟ್ಟು ಶಾಸಕರನ್ನ ಖರೀದಿಸಿದ್ದು, ಸುಪ್ರೀಂಕೋರ್ಟ್ ನ್ಯಾಯಾಧೀಶರು, ಸ್ಪೀಕರ್ ಅವರನ್ನು ಡೀಲ್ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಈ ಹಿಂದಿನ ಆಡಿಯೋದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಸರಕಾರ ರಚನೆಗೆ ಬಿಜೆಪಿ ವಾಮ ಮಾರ್ಗ ಹಿಡಿದಿದ್ದು ಇದರಿಂದಲೇ ನಿರೂಪಿತವಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ .