‘ತಾಲಿಬಾನ್ ಕ್ರಿಕೆಟ್‍ನ್ನು ಪ್ರೀತಿಸುತ್ತೆ, ಬೆಂಬಲಿಸುತ್ತೆ’

Date:

ತಾಲಿಬಾನ್ ಸಮಸ್ಯೆಯಿಂದ ಅಫ್ಘಾನಿಸ್ತಾನ ದೇಶ ತೊಂದರೆಯಲ್ಲಿದ್ದರೂ ತಾಲಿಬಾನ್‌ ನಿಯಮಗಳಿಂದ ಕ್ರಿಕೆಟ್‌ಗೆ ಏನೂ ತೊಂದರೆಯಿಲ್ಲ. ಯಾಕೆಂದರೆ ಅವರಿಗೆ ಕ್ರಿಕೆಟ್ ಬಗ್ಗೆ ಪ್ರೀತಿಯಿದೆ. ಕ್ರಿಕೆಟ್‌ಗೆ ಅವರ ಬೆಂಬಲವೂ ಇದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್‌ ನ (ಎಸಿಬಿ) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಮಿದ್ ಶಿನ್ವಾರಿ ಹೇಳಿದ್ದಾರೆ. ತಾಲಿಬಾನ್‌ಗಳಿಂದ ದೇಶಿ ಕ್ರಿಕೆಟ್ ಅಥವಾ ಕ್ರಿಕೆಟಿಗರು ಹೆದರಬೇಕಾಗಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

ಕಾಬುಲ್‌ನಿಂದ ಪಿಟಿಐ ಜೊತೆಗೆ ಮಾತನಾಡಿದ ಹಮಿದ್ ಶಿನ್ವಾರಿ, ತಾಲಿಬಾನ್‌ಗಳಿಂದ ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದರೂ ರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರರಿಗೆ ಮತ್ತು ಅವರ ಕುಟುಂಬಸ್ಥರಿಗೆ ತೊಂದರೆಯೇನಿಲ್ಲ. ಅವರೆಲ್ಲ ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ.
ಅಫ್ಘಾನಿಸ್ತಾನದ ಸ್ಟಾರ್ ಆಟಗಾರರಾದ ರಶೀದ್ ಖಾನ್, ಮೊಹಮ್ಮದ್ ನಬಿ ಮತ್ತು ಮುಜೀಬ್ ಝದ್ರನ್ ಸದ್ಯ ಯುನೈಟೆಡ್ ಕಿಂಗ್ಡಮ್‌ನಲ್ಲಿ ದ ಹಂಡ್ರೆಡ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕೂ ಮುನ್ನ ಆಲ್ ರೌಂಡರ್ ರಶೀದ್, ದೇಶದಲ್ಲಿನ ಭಯೋತ್ಪಾದನೆ ಬಗ್ಗೆ ಭೀತಿ ತೋರಿಕೊಂಡಿದ್ದರು. ದೇಶದಿಂದ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ತೋರಿಕೊಂಡಿದ್ದರು.


ಆದರೆ ತಾಲಿಬಾನ್‌ಗಳು ಕ್ರಿಕೆಟ್‌ಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳಿಗೆ ಅಡ್ಡಿಪಡಿಸಲಾರರು ಎಂದು ಹಮಿದ್ ಶಿನ್ವಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ತಾಲಿಬಾನ್‌ಗಳೂ ಕೂಡ ಕ್ರಿಕೆಟ್ ಪ್ರೀತಿಸುತ್ತಾರೆ. ಆರಂಭದಿಂದಲೂ ಅವರು ಕ್ರಿಕೆಟ್‌ಗೆ ಬೆಂಬಲಿಸುತ್ತಿದ್ದಾರೆ. ಅವರು ಯಾವತ್ತಿಗೂ ಕ್ರಿಕೆಟ್ ಸಂಬಂಧಿ ಚಟುವಟಿಕೆಗಳಲ್ಲಿ ಮಧ್ಯಪ್ರವೇಶಿಸುವುದಿಲ್ಲ,” ಎಂದು ಶಿನ್ವಾರಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...