ತಿಮ್ಮಪ್ಪನ ಮೊರೆಹೊದ ಗೌಡರ ಕುಟುಂಬ !?

Must read

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ.

ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಲಿದ್ದು, ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ತಿಮ್ಮಪ್ಪನ ದರ್ಶನವನ್ನು ಪಡೆಯಲಿದ್ದಾರೆ.

ನಾಳೆ ಬೆಳಗ್ಗೆ ಸುಪ್ರಭಾತ ಪೂಜೆಯಲ್ಲಿ ಪಾಲ್ಗೊಂಡು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ನಂತರ ಪದ್ಮಾವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ ಎಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.

ಎಚ್.ಡಿ.ದೇವೇಗೌಡರಿಗೆ 86 ವರ್ಷಗಳು ತುಂಬಿದ್ದು, ನಾಳೆ 87ನೆ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಹುಟ್ಟುಹಬ್ಬದ ಸಂದರ್ಭದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನವನ್ನು ಪ್ರತಿ ವರ್ಷವೂ ಗೌಡರು ಪಡೆಯುತ್ತಾರೆ

ಕಳೆದ ಒಂದು ವಾರದಿಂದ ಉಡುಪಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸಾಗಿದ್ದರು.

- Advertisement -spot_img

More articles

- Advertisement -spot_img

Latest article