ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ: ಆರ್ ಅಶೋಕ್
ಬೆಂಗಳೂರು: ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.