ತಿರುಪತಿಗೆ ಹೋಗುವವರಿಗೆ ಇಲ್ಲಿದೆ ಸಿಹಿಸುದ್ದಿ

Date:

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಮ್‌ ಸಮಿತಿ (ಟಿ​ಟಿ​ಡಿ​) ​ಗುಡ್‌ನ್ಯೂಸ್ ನೀಡಿದೆ. ಇನ್ನುಮುಂದೆ ತಿರುಮಲ ತಿರುಪತಿ ದೇವಸ್ಥಾನಮ್‌ ಸಮಿತಿ (ಟಿ​ಟಿ​ಡಿ​) ​ವೆಂಕ​ಟೇ​ಶ್ವ​ರ ದೇವಸ್ಥಾನದಲ್ಲಿ ದೇವರ ದರ್ಶನದ ಅವಧಿಯನ್ನು ರಾತ್ರಿ 11.30ರವ​ರೆಗೆ ವಿಸ್ತರಿಸಿದೆ.

ಭಕ್ತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಟಿಟಿಡಿ ದರ್ಶನದ ಅವಧಿಯನ್ನು ಹೆಚ್ಚಿಸಿದೆ. ತಿರುಪತಿ ದೇವಸ್ಥಾನದಲ್ಲಿ ನೀಡುವ ಉಚಿತ ದರ್ಶನದ ಟೋಕನ್‌ಗಳ ಪ್ರಮಾಣವನ್ನು ಹೆಚ್ಚಿಸುವುದಾಗಿ ಟಿಟಿಡಿಯ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಹೇಳಿದ್ದಾರೆ.

 

ಈವರೆ​ಗೆ 10 ಗಂಟೆಗೆ ದರ್ಶನದ ಅವಧಿ ಮುಕ್ತಾಯವಾಗುತ್ತಿತ್ತು. ಇನ್ನು 11.30ರವ​ರೆಗೆ ದರ್ಶನ ಭಾಗ್ಯ ಭಕ್ತಾ​ದಿ​ಗ​ಳಿಗೆ ಲಭಿ​ಸ​ಲಿದೆ. ನಂತರ ಏಕಾಂತ ಸೇವೆ ನಡೆ​ಯ​ಲಿ​ದ್ದು, ರಾತ್ರಿ 12 ಗಂಟೆಗೆ ದೇಗು​ಲದ ಬಾಗಿಲು ಮುಚ್ಚ​ಲಾ​ಗು​ತ್ತದೆ ಎಂದು ತಿಳಿ​ಸ​ಲಾ​ಗಿ​ದೆ.

ಈಗ ಪ್ರತಿದಿನ ಸರಾಸರಿ 25 ಸಾವಿರ ಭಕ್ತಾದಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಶನಿವಾರ 29 ಸಾವಿರ ಭಕ್ತರು ಭೇಟಿ ಕೊಟ್ಟಿದ್ದರು. ಹುಂಡಿಯಿಂದ 2.30 ಕೋಟಿ ರು. ಆದಾಯ ಸಂಗ್ರ​ವಾಗಿ​ದೆ.

ಸೆಪ್ಟೆಂಬರ್ 9 ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಉಚಿತವಾಗಿದೆ. ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...