ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿರುವ ನಟಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸುವ ಮುನ್ನ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ನಾಳೆ ಮಾ.20 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿರುವ ಸುಮ ಲತಾ ಅಂಬರೀಶ್ ನಿನ್ನೆ ತಡರಾತ್ರಿ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದಾಗ ಅರ್ಚಕರು ವಿಶೇಷ ಪೂಜೆ ನೆರವೇರಿಸಿ ತೀರ್ಥ ಪ್ರಸಾದ ವಿತರಿಸಿದರು.
ಮಂಡ್ಯ ಜನರ ಒತ್ತಾಸೆಯಂತೆ ಪತಿ ರೆಬೆಲ್‍ಸ್ಟಾರ್ ಅಂಬರೀಶ್ ಅವರ ಮಾದರಿಯಲ್ಲೇ ರಾಜಕೀಯ ಕ್ಷೇತ್ರಕ್ಕೆ ಧುಮುಕಿರುವ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು