No menu items!
12.5 C
Munich
Tuesday, April 28, 2026

ತೀರ್ಥಹಳ್ಳಿ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Must read

ತೀರ್ಥಹಳ್ಳಿ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ಪ್ರಕಾರ, ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article