ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಮಕರ ಲಗ್ನದಲ್ಲಿ 1 ಗಂಟೆ 44 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಿಂದ ತೀರ್ಥ ರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ತೀರ್ಥೋದ್ಭವವನ್ನು ಭಕ್ತರು ಕಣ್ತುಂಬಿಕೊಂಡಿದ್ದು, ಪುನೀತರಾಗಿದ್ದಾರೆ. ಮಾತೆಯ ದರ್ಶನಕ್ಕೆ ಸಹಸ್ರ ಸಹಸ್ರ ಭಕ್ತರು ಆಗಮಿಸಿದ್ದ ಹಿನ್ನಲೆ ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿತ್ತು. ತೀರ್ಥಸ್ವರೂಪಿಣಿಯಾದ ಕಾವೇರಿ ಮಾತೆಯ ದರ್ಶನವನ್ನು ಅಪಾರ ಭಕ್ತರು ಪಡೆಯುತ್ತಿದ್ದಾರೆ. ಭಕ್ತರು ಕಾವೇರಿಯ ಪವಿತ್ರ ಕೊಳದಲ್ಲಿ ಮಿಂದೆದ್ದಿದ್ದಾರೆ. ಬ್ರ‍್ರಹ್ಮಕುಂಡಿಕೆಯ ಬಳಿ ಸಾವಿರಾರು ಜನ ಭಕ್ತರು ನೆರೆದಿದ್ದರು. ಕೊಡವ ಧಿರಿಸಿನಲ್ಲಿ ಬಂದ ಭಕ್ತರು ದುಡಿಕೊಟ್ಟು ಪಾಟ್ ಬಡಿಯುತ್ತಾ ಕಾವೇರಿ ಸ್ಮರಣೆ ಮಾಡಿದರು.